ಮಡಿಕೇರಿ ಜೂ.10 : ಕೊಡಗು ಜಿಲ್ಲೆಯ ನೂತನ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜ್ ಅವರು ಜೂ.11 ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ.
ಅಪರಾಹ್ನ 12:30ಕ್ಕೆ, ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಾರ್ಯಕ್ರಮಕ್ಕೆ ಕೊಡಗಿನ ಶಾಸಕದ್ವಯರೊಂದಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.