ಮಡಿಕೇರಿ ಜೂ.10 : ಅಖಿಲ ಕೊಡವ ಸಮಾಜದಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಪೊನ್ನಣ್ಣ ಸೇರಿದಂತೆ ಸಾಧಕರನ್ನು ಸನ್ಮಾನಿಸಲಾಯಿತು.
ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ನಂತರ ಕಾವೇರಿ ಆಶ್ರಮಕ್ಕೆ ಭೇಟಿ ನೀಡಿದ ಶಾಸಕ ಪೊನ್ನಣ್ಣ ಹಾಗೂ ಅಖಿಲ ಕೊಡವ ಸಮಾಜ ಪದಾಧಿಕಾರಿಗಳು ಶತಾಯುಷಿಯನ್ನು ಸನ್ಮಾನಿಸಿದರು.