ಮಡಿಕೇರಿ ಜೂ.10 : ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಜೂ.12 ರಂದು ಕಾರುಗುಂದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ ಎಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನೂತನ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಸೋಮವಾರ ಬೆಳಗ್ಗೆ 10:30 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪಕ್ಷದ ಎಲ್ಲಾ ಮುಖಂಡರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಡಿಸಿಸಿ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು, ಬೂತ್ ಕಾಂಗ್ರೆಸ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು, ಸಹಕಾರಿ ಸಂಘದ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಇಸ್ಮಾಯಿಲ್ ಮನವಿ ಮಾಡಿದ್ದಾರೆ.









