ಮಡಿಕೇರಿ ಜೂ.10 : ಕೊಡಗಿನಲ್ಲಿ ಕಳೆದ 20 ವರ್ಷಗಳ ನಂತರ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದು, ಈ ಬಾರಿ ಕೊಡಗಿನ ಅಲ್ಪಸಂಖ್ಯಾತರ ನಾಯಕರಿಗೆ ಎಂಎಲ್ ಸಿ ಅಥವಾ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಎಂ.ಅಬ್ದುಲ್ ಲತೀಫ್ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನಲ್ಲಿ ಅಲ್ಪಸಂಖ್ಯಾತರ ಮತದಾರರು ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿಯ ಭದ್ರಕೋಟೆ ಕೊಡಗಿನ ಎರಡೂ ಕ್ಷೇತ್ರಗಳು ಕೂಡ ಕಾಂಗ್ರೆಸ್ ಪಾಲಾಗಿದೆ .
ಕೊಡಗಿನಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಪಸಂಖ್ಯಾತರ ಮತದಾರರು ಮುಖ್ಯ ಪಾತ್ರ ವಹಿಸಿದ್ದಾರೆ. ಆದರೆ ಈ ವರೆಗೆ ಕೊಡಗಿನ ಅಲ್ಪಸಂಖ್ಯಾತರ ನಾಯಕರುಗಳಿಗೆ ಸರ್ಕಾರದಲ್ಲಿ ಯಾವುದೇ ಸೂಕ್ತ ಸ್ಥಾನ ಮಾನಗಳು ಲಭಿಸಿಲ್ಲ
ಹಾಗಾಗಿ ಆದ್ದರಿಂದ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಎರಡು ಶಾಸಕರುಗಳು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಕೊಡಗಿನ ಅಲ್ಪಸಂಖ್ಯಾತರ ನಾಯಕರಿಗೆ ಎಂ ಎಲ್ ಸಿ ಅಥವಾ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು ಅಬ್ದುಲ್ ಲತೀಫ್ ಆಗ್ರಹಿಸಿದರು.
ವರದಿ : ನೌಫಲ್ ಕಡಂಗ