ಮಡಿಕೇರಿ ಜೂ.10 : ಕಾಫಿ ತೋಟದಲ್ಲಿದ್ದ ಬೀಟೆ ಮರವನ್ನು ಅಕ್ರಮವಾಗಿ ಕಡಿದು ಅದರ ನಾಟಾಗಳನ್ನು ಕದ್ದೊಯ್ಯುತ್ತಿದ್ದ ಸಂದರ್ಭ ವಾಹನ ಪಲ್ಟಿಯಾದ ಹಿನ್ನೆಲೆ ಮರಗಳ್ಳರು ಸ್ಥಳದಿಂದ ಪರಾರಿಯಾಗಿರುವ ಪ್ರಕರಣ ಪೊನ್ನಂಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಈ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀಟೆ ಮರದ 7 ನಾಟಾಗಳ ಸಹಿತ ಸಾಗಾಟಕ್ಕೆ ಬಳಸಿದ್ದ ಪಿಕ್ ಅಪ್ ವಾಹನವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದ ತೀತರಮಾಡ ಸುನೀಲ್ ಎಂಬುವವರ ಕಾಫಿ ತೋಟದಲ್ಲಿ ಬೀಟೆ ಮರಗಳಿದ್ದು, ಒಂದು ವಾರದ ಹಿಂದೆ ಮರಗಳ್ಳರು 1 ಮರವನ್ನು ಕಡಿದು ಹಾಕಿದ್ದರು. ಮಾತ್ರವಲ್ಲದೇ ಮರದ ಬುಡವನ್ನು 3 ನಾಟಾಗಳನ್ನಾಗಿ ಪರಿವರ್ತಿಸಿದ್ದರು. ಈ ಕುರಿತು ತೋಟದ ಮಾಲೀಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮಹಜರು ನಡೆಸಿ ಸ್ಥಳದಿಂದ ತೆರಳಿದ್ದರು. ಬೀಟೆ ಮರದ ನಾಟಾಗಳನ್ನು ತೋಟದಲ್ಲೇ ಬಿಡಲಾಗಿತ್ತು.
ತೋಟದ ಮಾಲೀಕರು ಬೆಂಗಳೂರಿಗೆ ತೆರಳಿದ್ದ ಮಾಹಿತಿ ಅರಿತ ಚೋರರು ಶುಕ್ರವಾರ ರಾತ್ರಿ ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಪಿಕ್ ಅಪ್ ವಾಹನದಲ್ಲಿ ಒಟ್ಟು 7 ನಾಟಾಗಳನ್ನು ತುಂಬಿಸಿ ಕದ್ದೊಯ್ಯುವ ಪ್ರಯತ್ನ ಮಾಡಿದ್ದರು. ಈ ಸಂದರ್ಭ ತೋಟದ ಒಳಗೆ ಬೀಟೆ ಮರ ತುಂಬಿದ್ದ ಪಿಕ್ ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ ಮರ ಕಳ್ಳರು ವಾಹನ ಸಹಿತ ಬೀಟೆ ಮರದ ನಾಟಾಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
1 ವಾರದ ಹಿಂದೆಯೇ ಬೀಟೆ ಮರ ಕಡಿದಿರುವ ಪ್ರಕರಣ ನಡೆದಿದೆ. ಪೊಲೀಸ್ ಇಲಾಖೆ ಮಹಜರು ನಡೆಸಿ ಬೀಟೆ ಮರದ ನಾಟಾಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದರು. ಆದರೂ, ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿ ಸ್ಥಳದಲ್ಲಿದ್ದ ಬೀಟೆ ಮರಗಳನ್ನು ಡಿಪೋಗೆ ಸ್ಥಳಾಂತರಿಸಿಲ್ಲ ಎಂದು ರೈತ ಸಂಘದ ಪ್ರಮುಖರು ಆರೋಪಿಸಿದರು. ತಕ್ಷಣ ಆರೋಪಿಗಳ ಬಂಧಕ್ಕೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಟ್ರುಮಾಡ ಸುಜಯ್ ಬೋಪ್ಪಯ್ಯ, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಅಲೇಮಾಡ ಮಂಜುನಾಥ್, ಪುಚ್ಚಿಮಾಡ ರಾಯ್ ಮಾದಪ್ಪ, ಗೋಣಿಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕ ಎಂ.ಗೋವಿಂದ ರಾಜ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*