ಮಡಿಕೇರಿ ಜೂ.11 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಎದುರಿಸಲು ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಡಾನೆ ಹಾವಳಿ ನಿಯಂತ್ರಣ ಸೇರಿದಂತೆ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ಬಜೆಟ್ ಆರಂಭಕ್ಕೂ ಮೊದಲು ಜಿಲ್ಲೆಗೆ ಆಗಮಿಸಿ ಕೆಡಿಪಿ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ, ನಡೆಯಲಿದೆ ಎಂದು ತಿಳಿಸಿದರು.
ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ ಮಡಿಕೇರಿ ನಗರಕ್ಕೆ ಕುಡಿಯುವ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಲಾಗಿದೆ ಎಂದರು.











