ಮಡಿಕೇರಿ ಜೂ.11 : ಕೊಡಗು ಜಿಲ್ಲಾ ಮೊಗೇರ ಸಮಾಜದ ವತಿಯಿಂದ ಮೊಗೇರ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು.
ನಗರದ ಬಾಲಭವನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೊಗೇರ ಸಮಾಜದ ಗೌರವಾಧ್ಯಕ್ಷ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ, ಮೊಗೇರ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಮೊಗೇರ ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾಗಬೇಕು ಎಂದು ಕರೆ ನೀಡಿದರು.
ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ, ಇತ್ತೀಚಿನ ದಿನಗಳಲ್ಲಿ ಮೊಗೇರ ಸಮಾಜ ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುತ್ತಿರುವುದು ಶ್ಲಾಘನೀಯವೆಂದು ಹೇಳಿದರು.
ಮುಂದಿನ ದಿನಗಳಲ್ಲಿ ಮೊಗೇರ ಜನಾಂಗದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಶಿಕ್ಷಣ ಕ್ಷೇತ್ರದಲ್ಲಿ ಸಮಾಜದ ಸಾಧನೆಗೆ ಕಾಳಜಿ ವಹಿಸಲಾಗುವುದು. ಮೊಗೇರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡುವುದು ಮತ್ತು ಸರ್ಕಾರದಿಂದ ಶಿಕ್ಷಣಕ್ಕೆ ದೊರೆಯುವ ಸೌಲಭ್ಯವನ್ನು ಒದಗಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ರವಿ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಸ್ಥಾಪಕ ಸಲಹೆಗಾರ ಪಿ.ಕೆ.ಬಾಬು ವಿದ್ಯಾರ್ಥಿಗಳು ದುಶ್ಚಟದಿಂದ ದೂರ ಉಳಿಯಬೇಕು, ಮೊಬೈಲ್ ಬಳಕೆ ಕಡಿಮೆ ಮಾಡಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಕರೆ ನೀಡಿದರು. ಉನ್ನತ ಶಿಕ್ಷಣದ ಮೂಲಕ ಉನ್ನತ ಹುದ್ದೆಯನ್ನು ಅಲಂಕರಿಸಿ ಮೊಗೇರ ಸಮಾಜ ಮತ್ತು ಪೋಷಕರಿಗೆ ಕೀರ್ತಿ ತಂದುಕೊಡಬೇಕೆoದು ಕಿವಿಮಾತು ಹೇಳಿದರು.
ಫೀ.ಮಾ.ಕಾರ್ಯಪ್ಪ ಕಾಲೇಜಿನ ದೈಹಿಕ ಪ್ರಾಧ್ಯಾಪಕ ರಮೇಶ್ ಪಿ.ಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮೊಗೇರ ಸಮಾಜದ ಸೋಮವಾರಪೇಟೆ ತಾಲ್ಲೂಕು ಮಾಜಿ ಅಧ್ಯಕ್ಷ ಬಿ.ಎಂ.ದಾಮೋದರ, ಜಿಲ್ಲಾ ಸಮಿತಿ ಸದಸ್ಯ ಪಿ.ವಿ.ವೆಂಕಪ್ಪ, ಹಿರಿಯ ಸದಸ್ಯರಾದ ಪೊಡಿಯ ತಾಳತ್ತಮನೆ, ಸೋಮಯ್ಯ ಹೆಬ್ಬೆಟ್ಟಗೇರಿ, ಜಿಲ್ಲಾ ಉಪಾಧ್ಯಕ್ಷೆ ಚಂದ್ರಾವತಿ, ಜಿಲ್ಲಾ ಸಮಿತಿಯ ಸದಸ್ಯ ಎಂ.ಜಿ.ಚಂದ್ರು, ಸಮಾಜದ ಪ್ರಮುಖರಾದ ಪ್ರಕಾಶ್ ಪಿ.ಕೆ, ರಘು ಹೆಬ್ಬೆಟ್ಟಗೇರಿ, ರಮೇಶ್ ಪಿ.ಎಂ, ಜಯ ಹೆಬ್ಬೆಟ್ಟಗೇರಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಒಂದನೇ ತರಗತಿಯಿಂದ ಪಿಯುಸಿ ವರೆಗೆ ವ್ಯಾಸಂಗ ಮಾಡುತ್ತಿರುವ ಮಡಿಕೇರಿ ತಾಲ್ಲೂಕಿನ ಸುಮಾರು 130ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಮೊಗೇರ ಸಮಾಜದ ಮಾಜಿ ಪ್ರಧಾನ ಕಾರ್ಯದರ್ಶಿ ಜನಾರ್ಧನ ಪಿ.ಬಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*