ಮಡಿಕೇರಿ ಜೂ.12 : ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜೂ.25ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಳಿಸಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಗಳು ಸ್ವ-ವಿವರಗಳೊಂದಿಗೆ ಅರ್ಜಿಯನ್ನು ಮಹಾಸಭೆಯ www.veerashaivamahasabha.in ವೆಬ್‍ಸೈಟ್‍ನಲ್ಲಿ ಜೂ.25ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್‍ಲೈನ್‍ಮೂಲಕ ಬಂದ ಅರ್ಜಿಯನ್ನು ಮಾತ್ರ ಸ್ವೀಕರಿಸಲಾಗುವುದು ಎಂದು ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.








