ಮಡಿಕೇರಿ ಜೂ.12 : ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು (Consumer’s interaction Meeting) ಸಭೆಯು ಜೂ.13 ರಂದು ಮಧ್ಯಾಹ್ನ 3 ರಿಂದ 04 ಗಂಟೆ ವರೆಗೆ ಮಡಿಕೇರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಡಿಕೇರಿ ಉಪ ವಿಭಾಗ (ಮಡಿಕೇರಿ ತಾಲ್ಲೂಕು) ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.









