ಮಡಿಕೇರಿ ಜೂ.12 : ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‍ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ.
ಸುಮಾರು 5 ಟನ್ ಭಾರ ಹೊರುವ ಸಾಮರ್ಥ್ಯ ಹೊಂದಿರುವ ಈ ಬ್ರಿಡ್ಜ್‍ನಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು.
ಇದು ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆಯಾಗಿದೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಇಂದು ಆಕರ್ಷಕ ಸೇತುವೆಯನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಪೊನ್ನಣ್ಣ, ಕೊಡಗು ಪ್ರಕೃತಿ ದತ್ತವಾದ ಜಿಲ್ಲೆಯಾಗಿದೆ. ನಿಸರ್ಗಕ್ಕೆ ಧಕ್ಕೆಯಾಗದ ರೀತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕು ಎಂದರು.
ಈ ಅಪರೂಪದ ಯೋಜನೆಯಿಂದ ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಜೊತೆಗೆ ಅವಲಂಬಿತರಿಗೆ ಉದ್ಯೋಗವಕಾಶ ದೊರೆಯಲಿದೆ ಎಂದು ತಿಳಿಸಿದರು.
ಗ್ರೀನ್ ಸಿಟಿ ಫೋರಂ ನ ಅಧ್ಯಕ್ಷ ಚೆಯ್ಯಂಡ ಸತ್ಯ, ಉದ್ಯಮಿ ಹೆಚ್.ಎಂ.ನಂದಕುಮಾರ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
Breaking News
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*