Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡ್ಲೂರಿನಲ್ಲಿ ಗೋ ಗ್ರೀನ್ ಅಭಿಯಾನಕ್ಕೆ ಚಾಲನೆ : ಪರಿಸರ ಕಾಳಜಿ ವಹಿಸಲು ವಿದ್ಯಾರ್ಥಿಗಳಿಗೆ ಕರೆ*
ಇತ್ತೀಚಿನ ಸುದ್ದಿಗಳು

*ಕೂಡ್ಲೂರಿನಲ್ಲಿ ಗೋ ಗ್ರೀನ್ ಅಭಿಯಾನಕ್ಕೆ ಚಾಲನೆ : ಪರಿಸರ ಕಾಳಜಿ ವಹಿಸಲು ವಿದ್ಯಾರ್ಥಿಗಳಿಗೆ ಕರೆ*

June 13, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ, ಜೂ.13 :  ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ರಾಯಭಾರಿಗಳಾಗಿ ರೂಪುಗೊಳ್ಳಬೇಕು ಎಂದು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಕರೆ ನೀಡಿದರು.

ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ‌ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ಜೆ.ಸಿ.ಬೋಸ್ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ( ಎನ್.ಎಸ್.ಎಸ್.) ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಘಟಕದ ವತಿಯಿಂದ ‘ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕವಾದ ನಿರ್ವಹಣೆ ಪರಿಸರ ಮತ್ತು ಜೀವ- ಸಂಕುಲದ ಸಂರಕ್ಷಣೆ ‘ ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನ’ದ ಅಂಗವಾಗಿ ಪ್ರೌಢಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ “ನಮ್ಮ‌ನಡೆ ಪರಿಸರದೆಡೆಗೆ” – “ಗೋ ಗ್ರೀನ್ ಅಭಿಯಾನ”ಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ‌ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ , ಪರಿಸರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಭವಿಷ್ಯದ ದೃಷ್ಟಿಯಿಂದ ಅರಣ್ಯ ಸಂರಕ್ಷಣೆಗಾಗಿ ನಾವು ಹೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಸಂಕಲ್ಪ ತೊಡಬೇಕು ಎಂದರು.
ನಾವು ಪಶ್ಚಿಮಘಟ್ಟದಲ್ಲಿನ ಜೀವ ವೈವಿಧ್ಯ, ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಸುಂದರ ಪ್ರಕೃತಿ ತಾಣವಾದ ಕೊಡಗಿನ ಅರಣ್ಯ, ಪರಿಸರ, ಜೀವ ವೈವಿಧ್ಯ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.

“ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳು” ಕುರಿತು ಮಾಹಿತಿ ನೀಡಿದ
ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಎಸ್.ಸತೀಶ್,
ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಶಾಲಾ ವಿದ್ಯಾರ್ಥಿಗಳು ತಮ್ಮ ಶಾಲಾ ಅಂಗಳ ಮತ್ತು ಸುತ್ತಲಿನ ಪರಿಸರದಲ್ಲಿ ವರ್ಷದಲ್ಲಿ ಕನಿಷ್ಠ ಎರಡು ಗಿಡಗಳನ್ನು ನೆಟ್ಟು ಅದನ್ನು ನಿರ್ವಹಣೆ ಮಾಡಿ ಪೋಷಿಸುವ ಗುರುತರ ಜವಾಬ್ದಾರಿ ಹೊಂದಬೇಕು. ಗಿಡನೆಟ್ಟು ಬೆಳೆಸುವ ವಿದ್ಯಾರ್ಥಿಗಳ ಹೆಸರನ್ನು ಪ್ರಕಟಿಸುವ ಮೂಲಕ ಉತ್ತಮವಾಗಿ ಗಿಡ ಮರ ಬೆಳೆಸುವ ಮಕ್ಕಳನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಹೊಂದಬೇಕು ಎಂದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ
ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗ್ರಾ.ಪಂ  ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು.

ಇಕೋ ಕ್ಲಬ್ ನ‌ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಸಂಪನ್ಮೂಲ, ಶಿಕ್ಷಕರಾದ ಜಿ.ಶ್ರೀನಾಥ್, ಉ.ರಾ.ನಾಗೇಶ್,
ಎಸ್.ಡಿ.ಎಂ.ಸಿ.ಸದಸ್ಯರಾದ ಜವರಯ್ಯ, ಎಂ.ರಂಗಸ್ವಾಮಿ, ಕೆ.ಎಸ್.ರಾಜಾಚಾರಿ, ಉಷಾ, ಶಿಕ್ಷಕ  ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಸಿ.ಆರ್.ಪಿ. ಕೆ.ಶಾಂತಕುಮಾರ್, ಸ್ವಯಂ ಸೇವಾ ಸಂಘಟನೆಯ ಪ್ರಮುಖ  ಸುನಂದಕುಮಾರ್, ಎಚ್.ಸಿ.ಗೋವಿಂದರಾಜ್, ಅರಣ್ಯ ರಕ್ಷಕ ಮಂಜೇಗೌಡ, ಇತರರು ಇದ್ದರು.
ಪ್ರತಿಜ್ಞೆ ಸ್ವೀಕಾರ : ಇದಕ್ಕೂ ಮುನ್ನ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ಘಟಕ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು , ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಘಟಕದ ಸಹಯೋಗದಲ್ಲಿ ಪರಿಸರ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು.
ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಕುರಿತ ಭಿತ್ತಿಫಲಕಗಳನ್ನು‌ ಹಿಡಿದು ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಮಾಲಿನ್ಯ ತಡೆಯಿರಿ,  ಗಿಡನೆಟ್ಟು ಬೆಳೆಸೋಣ, ಪರಿಸರ ಸಂರಕ್ಷಿಸೋಣ ಬನ್ನಿ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಖ್ಯಾತ ಖಳನಟ ಕಜನ್‌ ಖಾನ್‌ ಹೃದಯಾಘಾತದಿಂದ ನಿಧನ*
Next Article *ಅಪರಿಚಿತ ಶವ ಪತ್ತೆ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.