ಮಡಿಕೇರಿ ಜೂ.13 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸ್ನಾತಕೋತ್ತರ ಕೇಂದ್ರ, ಕೊಡಗು ವಿಶ್ವವಿದ್ಯಾನಿಲಯ ಚಿಕ್ಕಅಳುವಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ, ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಶಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ, ಕುಶಾಲನಗರ ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ ಹಾಗೂ ವಾಣಿಜ್ಯೋದ್ಯಮಿಗಳ ನಿಗಮದ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯು ಜೂ.14 ರಂದು ಬೆಳಗ್ಗೆ 11 ಗಂಟೆಗೆ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಶಾಸಕ ಡಾ.ಮಂಥರ್ ಗೌಡ, ಮುಖ್ಯಮಂತ್ರಿ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಶಾಸಕ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೆಗೌಡ, ತೊರೆನೂರು ಗ್ರಾ.ಪಂ.ಅಧ್ಯಕ್ಷರಾದ ರೂಪ ಮಹೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಚಿಕ್ಕ ಅಳುವಾರ ವಿಶ್ವ ವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರದ ಉಪ ಕುಲಪತಿ ಡಾ. ಅಶೋಕ್ ಸಂಗಪ್ಪ ಎಸ್.ಅಲೂರ್, ಮೈಸೂರು ವಿಭಾಗದ ವಿಭಾಗೀಯ ಜಂಟಿ ನಿರ್ದೇಶಕರು ಡಾ.ರಾಜೇಶ್ವರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರು ಡಾ.ಶಿವಕುಮಾರ್, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಕುಶಾಲನಗರ ರೋಟರಿ ಸಂಸ್ಥೆ ಅಧ್ಯಕ್ಷರಾದ ಉಲ್ಲಾಸ್ , ಕುಶಾಲನಗರ ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ಚಿನ್ನಪ್ಪ, ಕುಶಾಲನಗರ ವಾಣಿಜ್ಯೋದ್ಯಮಿಗಳ ನಿಗಮದ ಅಧ್ಯಕ್ಷರಾದ ಅಮೃತ ರಾಜ್, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಎಂ.ಡಿ. ರಂಗಸ್ವಾಮಿ. ಸಂಪನ್ಮೂಲ ವ್ಯಕ್ತಿಗಳಾಗಿ ವೈದ್ಯಾಧಿಕಾರಿಗಳು ರಕ್ತನಿಧಿ ಕೇಂದ್ರದ ಡಾ.ಕರುಂಬಯ್ಯ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*