ಸೋಮವಾರಪೇಟೆ ಜೂ.14 : ಸೋಮವಾರಪೇಟೆ ವಕೀಲರ ಸಂಘಕ್ಕೆ ಜಿಲ್ಲಾ ನ್ಯಾಯಾಧೀಶ ಡಿ.ಟಿ.ಪುಟ್ಟರಂಗ ಸ್ವಾಮಿ ಭೇಟಿ ನೀಡಿದರು.
ಈ ಸಂದರ್ಭ ಸೋಮವಾರಪೇಟೆ ನ್ಯಾಯಾಲಯ ಹಾಗೂ ಸಂಘದ ಕಚೇರಿಗೆ ಬೇಕಾದ ಮೂಲಭೂತ ಅವಶ್ಯಕತೆಗಳ ಕುರಿತು ಸಂಘದ ಪದಾಧಿಕಾರಿಗಳು ಗಮನ ಸೆಳೆಸದರು.
ಈ ಸಂದರ್ಭ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಮತ್ತಿತರರು ಇದ್ದರು.








