ಮಡಿಕೇರಿ ಜೂ.14 : ಮಡಿಕೇರಿ ನಗರದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸಲು ಹಳೆಯ ಪೈಪ್ ಲೈನ್ ಗಳನ್ನು ಬದಲಾಯಿಸಿ ನೂತನ ಪೈಪ್ ಲೈನ್ ಗಳ ಅಳವಡಿಕೆಗೆ 60 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೇ 20 ಕೋಟಿ ರೂ. ಬಿಡುಗಡೆಯಾಗಿದ್ದು, ಉಳಿದ ಹಣವನ್ನು ಬಿಡುಗಡೆ ಮಾಡುವಂತೆ ನೂತನ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 120 ಕಿ.ಮೀ ನಷ್ಟು ನೂತನ ಪೈಪ್ ಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗಿದ್ದು, ಸರ್ಕಾರದ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದರು.
ನಗರದ ಜನರಿಗೆ ಯಾವುದೇ ಅಡಚಣೆ ಇಲ್ಲದೆ ಕುಡಿಯುವ ನೀರು ಒದಗಿಸಲು ನಗರಸಭೆ ಬದ್ಧವಾಗಿದೆ. ಕಳೆದ ಕೆಲವು ದಿನಗಳ ಕಾಲ ತಾಂತ್ರಿಕ ಕಾರಣಗಳಿಂದ ನೀರಿನ ಸಮಸ್ಯೆ ಎದುರಾಗಿತ್ತು. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇವೆ, ಮೋಟಾರ್ ಗಳನ್ನು ಸುಸ್ಥಿತಿಯಲ್ಲಿಡಲು ಕ್ರಮ ಕೈಗೊಳ್ಳಲಾಗಿದೆ. ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದರು.
ನಗರದಲ್ಲಿ 57 ಕೊಳವೆ ಬಾವಿಗಳಿದ್ದು, 30 ಕೊಳವೆ ಬಾವಿಗಳಿಗೆ ಮೋಟಾರ್ ಅಳವಡಿಸಲಾಗಿದೆ. ಇದಕ್ಕಾಗಿ ಸುಮಾರು 17 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದೆ. ಕೂಟುಹೊಳೆ, ರೋಷನಾರ ಸೇರಿದಂತೆ ನಗರದ ಜಲಮೂಲಗಳ ಹೂಳೆತ್ತಲು ಯೋಜನೆ ರೂಪಿಸಲಾಗಿದ್ದು, ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಕಸ ವಿಲೇವಾರಿ ಘಟಕ ಸ್ಥಾಪನೆಗೆ ಮಂಜೂರಾಗಿರುವ 10 ಎಕರೆ ಜಾಗಕ್ಕೆ ಬೇಲಿ ಹಾಕಲಾಗಿದೆ. ಇಲ್ಲಿನ ಅಭಿವೃದ್ಧಿ ಕಾರ್ಯಗಳಿಗಾಗಿ 700 ಲಕ್ಷ ರೂ.ಗಳ ಅಗತ್ಯವಿದ್ದು, ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮಳೆಗಾಲಕ್ಕೂ ಮೊದಲು ಬೀದಿ ದೀಪಗಳನ್ನು ಅಳವಡಿಸಲಾಗುವುದು, ಮಳೆ ನೀರು ಸರಾಗವಾಗಿ ಹರಿಯಲು ಚರಂಡಿಗಳ ಹೂಳೆತ್ತಲಾಗುವುದು ಎಂದರು.
::: ಎಲ್ಲೆಂದರಲ್ಲಿ ಕಸ :::
ಪ್ರವಾಸಿಗರು ಹಾಗೂ ಹೋಂಸ್ಟೇ ನಡೆಸುತ್ತಿರುವವರು ಎಲ್ಲೆಂದರಲ್ಲಿ ಕಸವನ್ನು ಸುರಿಯುತ್ತಿದ್ದು, ನಗರದ ಅಂದ ಗೆಡಿಸುತ್ತಿದ್ದಾರೆ. ಪ್ರತಿದಿನ ಕಸ ಸಂಗ್ರಹಿಸುವ ವಾಹನ ಮನೆ ಬಾಗಿಲಿಗೆ ಬಂದರೂ ಕಸ ಹಾಕದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ನಗರದ ಹಿತದೃಷ್ಟಿಯಿಂದ ಸಾರ್ವಜನಿಕರು ಕಸವನ್ನು ವಾಹನಕ್ಕೆ ಹಾಕಿ ಸಹಕರಿಸಬೇಕೆಂದು ಅನಿತಾ ಪೂವಯ್ಯ ಮನವಿ ಮಾಡಿದರು.
ಪ್ಲಾಸ್ಟಿಕ್ ಬಾಟಲಿ ಮತ್ತು ಒಣ ತ್ಯಾಜ್ಯಗಳನ್ನು ನಿಗಧಿತ ಸ್ಥಳದಲ್ಲಿ ಹಾಕಲು ರಾಜಾಸೀಟು, ಖಾಸಗಿ ಬಸ್ ನಿಲ್ದಾಣ ಸೇರಿದಂತೆ ನಗರದ ಮೂರು ಕಡೆ ಒಣ ಕಸ ಸಂಗ್ರಹದ ತೊಟ್ಟಿಗಳನ್ನು ಇಡಲಾಗಿದೆ. ಖಾಸಗಿ ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ಇನ್ನೂ ಅನೇಕ ಕಡೆ ತೊಟ್ಟಿಗಳನ್ನು ಇಡಲಾಗುವುದು ಮತ್ತು ಶುಚಿತ್ವಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯರುಗಳಾದ ಬಿಜೆಪಿಯ ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಪಕ್ಷದ ನಗರಾಧ್ಯಕ್ಷ ಮನು ಮಂಜುನಾಥ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್ ಉಪಸ್ಥಿತರಿದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*