ಮಡಿಕೇರಿ ಜೂ.14 : ಕೊಡಗು ಜಿ.ಪಂ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪೊನ್ನಂಪೇಟೆಯಲ್ಲಿ ನಿರ್ಮಾಣವಾಗಲಿರುವ ನೂತನ ಪಶುವೈದ್ಯ ಆಸ್ಪತ್ರೆಯ ಕಟ್ಟಡಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಭೂಮಿ ಪೂಜೆ ನೆರವೇರಿಸಿದರು.
ಕರ್ನಾಟಕ ಸರ್ಕಾರದಿಂದ ಮಂಜೂರಾಗಿರುವ ರೂ.53 ಲಕ್ಷ ಅನುದಾನದಲ್ಲಿ ನೂತನ ಪಶುವೈದ್ಯ ಆಸ್ಪತ್ರೆಯು ನಿರ್ಮಾಣವಾಗಲಿದ್ದು, ಸಾರ್ವಜನಿಕರಿಗೆ ಮುಂದಿನ ದಿನಗಳಲ್ಲಿ ಇದರ ಸೇವೆ ಲಭ್ಯವಾಗಲಿದೆ ಎಂದು ಪಶುವೈದ್ಯ ಇಲಾಖೆಯ ಕೊಡಗು ಜಿಲ್ಲಾ ಉಪ ನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ನೂತನ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಎ.ಎಸ್.ಪೊನ್ನಣ್ಣ, ಸರ್ಕಾರದ ಕಾರ್ಯಕ್ರಮಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಬೇಕು. ಕಾಮಗಾರಿಯ ಗುಣಮಟ್ಟ ಉತ್ತಮವಾಗಿರಬೇಕು. ಇಲಾಖೆಯು ತಿಳಿಸಿರುವ ನಿರ್ದೇಶನದಂತೆ ಕಾಮಗಾರಿಯ 6 ತಿಂಗಳೊಳಗೆ ಪೂರೈಸಿ ನಾಗರಿಕರಿಗೆ ಇದರ ಪ್ರಯೋಜನ ದೊರೆಯಲು ಅನುವು ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮೇಲುಸ್ತುವಾರಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ಆಸ್ಪತ್ರೆಯ ಒಳಭಾಗದಲ್ಲಿರುವ ಔಷಧಿಗಳನ್ನು ಪರಿಶೀಲಿಸಿ, ನಾಗರಿಕರಿಗೆ ಉತ್ತಮ ಸೇವೆ ನೀಡಲು ಸೂಚಿಸಿದರು.
ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ಎ.ಎಸ್.ಶಾಂತೇಶ್, ಶ್ರೀಮಂಗಲ ಪಶು ವೈದ್ಯಾಧಿಕಾರಿ ಬಿ.ಜಿ.ಗಿರೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಕೋಳೇರ ಭಾರತಿ, ಅಣ್ಣಿರ ಹರೀಶ್, ಕರ್ತಮಾಡ ರಶಿಕ, ಜುನೈದ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿ.ಪಂ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಹಿರಿಯ ನಾಯಕ ಎರ್ಮು, ಕಾಂಗ್ರೆಸ್ ಪಕ್ಷದ ಪ್ರಮುಖ ಗಿರೀಶ್ ಮತ್ರಂಡ ದಿಲ್ಲು, ಅನೀಶ್, ಬಾಳೆಲೆ ಆಸ್ಪತ್ರೆಯ ಡಾ.ಚಂದ್ರಶೇರ್ ಮತ್ತಿತರ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*