ಮಡಿಕೇರಿ ಜೂ.14 : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಸರ್ವರ್ ಅನ್ನು ಜೂ.28 ರಿಂದ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಜೂನ್ ತಿಂಗಳ ಕೊನೆಯ ಮೂರು ದಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡಲು ಸಾಧ್ಯವಿಲ್ಲ.
ಆದ್ದರಿಂದ ಜೂ.27 ರಂದು ಪಡಿತರ ಪಡೆಯಲು ಕೊನೆಯ ದಿನ ಆಗಿದೆ. ಜಿಲ್ಲೆಯ ಆದ್ಯತಾ (ಬಿಪಿಎಲ್ ಮತ್ತು ಎಎವೈ) ಪಡಿತರ ಚೀಟಿ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಜೂನ್ ತಿಂಗಳ ಪಡಿತರವನ್ನು ಜೂ.27 ರೊಳಗೆ ಪಡೆಯುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ತಿಳಿಸಿದ್ದಾರೆ.









