ಕುಶಾಲನಗರ, ಜೂ.15 : ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದಾಗಿ ವಾತಾವರಣ ಕಲುಷಿತಗೊಳ್ಳುತ್ತಿದೆ.
ಪ್ರತಿಯೊಬ್ಬರೂ ಈ ವಿಷಕಾರಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸುವತ್ತ ಎಲ್ಲರೂ ಕೈಜೋಡಿಸಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷೆ ಇಂದಿರಾ ರಮೇಶ್ ಮನವಿ ಮಾಡಿದರು.
ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕೂಡುಮಂಗಳೂರು ಮತ್ತು ಕೂಡಿಗೆ ಗ್ರಾ.ಪಂ ಗಳ ಸಹಯೋಗದೊಂದಿಗೆ ಎಸ್.ಡಿ.ಎಂ.ಸಿ. ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ಘಟಕ,
ಇಕೋ ಕ್ಲಬ್, ಎನ್ನೆಸ್ಸೆಸ್ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಮಾಸಾಚರಣೆ ಅಂಗವಾಗಿ “ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಸ್ನೇಹಿ ಬಟ್ಟೆ ಚೀಲ ಬಳಸಿ” ಎಂಬ ಘೋಷವಾಕ್ಯದೊಂದಿಗೆ
“ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳು” ಕುರಿತು ಏರ್ಪಡಿಸಿದ್ದ
ಪರಿಸರ ಜಾಗೃತಿ ಆಂದೋಲನದಲ್ಲಿ ಬಟ್ಟೆ ಕೈ ಚೀಲ ಬಿಡುಗಡೆಗೊಳಿಸಿ ಮಾತನಾಡಿದ ಅವರು,
ತಮ್ಮ ದೈನಂದಿನ ಬದುಕಿನಲ್ಲಿ ಪರಿಸರದ ಕಡೆಗೆ ಕಾಳಜಿ ವಹಿಸುವುದರೊಂದಿಗೆ ಪ್ಲಾಸ್ಟಿಕ್ ನಿರ್ಮೂಲನೆಗೆ ಕೈ ಜೋಡಿಸಬೇಕು ಎಂದರು.
ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಕುರಿತು ಮಾಹಿತಿ ನೀಡಿದ ಮುಖ್ಯ ಶಿಕ್ಷಕ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಬಟ್ಟೆ, ಕಾಗದ ಹಾಗೂ ಇತರ ಪರಿಸರ ಸ್ನೇಹಿ ಕೈಚೀಲ ಬಳಸಬೇಕು’ ಪ್ಲಾಸ್ಟಿಕ್ ಬಳಕೆ ಅನೇಕ ಕಾಯಿಲೆಗಳಿಗೆ ಕಾರಣವಾಗಿದ್ದು, ಪರಿಸರವನ್ನು ನಾಶ ಮಾಡುತ್ತಿದೆ. ಆದ್ದರಿಂದ ನಾವು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಬಟ್ಟೆ ಚೀಲ ಬಳಸುವ ಮೂಲಕ ನಮ್ಮ ಅರೋಗ್ಯ ಮತ್ತು ಪರಿಸರ ಕಾಪಾಡಿಕೊಳ್ಳಬೇಕಾಗಿದೆ ಎಂದರು.
ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಎಸ್.ಸತೀಶ್, ಮಾತನಾಡಿ, ಪ್ಲಾಸ್ಟಿಕ್ ಬಳಕೆ ಬೆಳೆದು ಬಂದ ಬಗೆ ಹಾಗೂ ಅದರಿಂದಾಗುತ್ತಿರುವ ಅನಾನುಕೂಲತೆಗಳ ಬಗ್ಗೆ ತಿಳಿಸಿಕೊಟ್ಟರು.
ಪ್ಲಾಸ್ಟಿಕ್ ಬಳಕೆ ತ್ಯಜಿಸುವುದು ಇಂದು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಅಲ್ಲದೇ, ನಾವು ಜೀವಿಸುವ ಪರಿಸರವನ್ನು ಸ್ವಚ್ಛವಾಗಿಡುವುದು ವೈಯಕ್ತಿಕವಾಗಿ ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ಬದಲು ನಾವು ಪರಿಸರ ಸ್ನೇಹಿ ಬಟ್ಟೆ, ಸೆಣಬು ಮತ್ತಿತರ ವಸ್ತುಗಳನ್ನು ಬಳಸುವ ಅಭ್ಯಾಸ ಮಾಡಿಕೊಳ್ಳಬೇಕು ಎಂದರು.
ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಬಟ್ಟೆ, ಕಾಗದ ಹಾಗೂ ಇತರ ಪರಿಸರ ಸ್ನೇಹಿ ಕೈಚೀಲ ಬಳಸಬೇಕು’ ಪ್ಲಾಸ್ಟಿಕ್ ಬಳಕೆ ಅನೇಕ ಕಾಯಿಲೆಗಳಿಗೆ ಕಾರಣವಾಗಿದ್ದು, ಪರಿಸರವನ್ನು ನಾಶ ಮಾಡುತ್ತಿದೆ. ಆದ್ದರಿಂದ ನಾವು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಬಟ್ಟೆ ಚೀಲ ಬಳಸುವ ಮೂಲಕ ನಮ್ಮ ಆರೋಗ್ಯ ಮತ್ತು ಪರಿಸರ ಕಾಪಾಡಿಕೊಳ್ಳಬೇಕಾಗಿದೆ.
ಪ್ಲಾಸ್ಟಿಕ್ ಬಳಕೆ ಬೆಳೆದು ಬಂದ ಬಗೆ ಹಾಗೂ ಅದರಿಂದಾಗುತ್ತಿರುವ ಅನಾನುಕೂಲತೆಗಳ ಬಗ್ಗೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟ ಅವರು ಪ್ಲಾಸ್ಟಿಕ್ ಬಳಕೆ ತ್ಯಜಿಸುವುದು ಇಂದು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಅಲ್ಲದೇ, ನಾವು ಜೀವಿಸುವ ಪರಿಸರವನ್ನು ಸ್ವತ್ಛವಾಗಿಡುವುದು ವೈಯಕ್ತಿಕವಾಗಿ ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ, ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಸಂಪನ್ಮೂಲ
ಶಿಕ್ಷಕರಾದ ಜಿ.ಶ್ರೀನಾಥ್, ಉ.ರಾ.ನಾಗೇಶ್, , ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಸಿ.ಆರ್.ಪಿ.,ಕೆ.ಶಾಂತಕುಮಾರ್, ಸ್ಥಳೀಯರಾದ ಕೆ.ಎಸ್.ರಾಜಾಚಾರಿ ಇದ್ದರು.







