ಮಡಿಕೇರಿ ಜೂ.15 : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಹಿರಿಕರ ರವಿ ಭಾಜನರಾಗಿದ್ದಾರೆ.
ಪ್ರಜಾಸತ್ಯ ಪತ್ರಿಕೆಯಲ್ಲಿ 5-07-2022 ರಂದು ಕತ್ತಲಲ್ಲಿ ಕಮರುತ್ತಿದೆ ಕಿಬ್ಬೆಟ್ಟ ಗಿರಿಜನರ ಬದುಕು ಶಿರೋನಾಮೆಯಲ್ಲಿ ಪ್ರಕಟವಾದ ವಿಶೇಷ ವರದಿ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ.ಬಿ. ಮಹಾಂತೇಶ್ ಸ್ಮರರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ವಾರ್ಷಿಕವಾಗಿ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿ ನೀಡಲಾಗುತ್ತದೆ.
ಜೂನ್ 25 ರಂದು ಮಡಿಕೇರಿಯಲ್ಲಿರುವ ಪತ್ರಿಕಾ ಭವನದಲ್ಲಿ ಆಯೋಜಿಸಿರುವ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 5,000 ರೂಪಾಯಿ, ಪ್ರಶಸ್ತಿ ಫಲಕ ಇರುತ್ತದೆ.