ಸುಂಟಿಕೊಪ್ಪ ಜೂ.15 : ಕುಶಾಲನಗರ ಕೊಡಗು ಜಿಲ್ಲಾ ಗೌಡ ನೌಕರರ ಟ್ರಸ್ಟ್ ಉದ್ಘಾಟನೆ, ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ ಹಾಗೂ ಜಿಲ್ಲೆಯ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭವು ಜೂ.18 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿದ್ದು, ಆದಿ ಚುಂಚನಗಿರಿ ಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಹಾಸನ ಕೊಡಗು ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಆರ್ಶಿವಚನ ಹಾಗೂ ಸಮಾರಂಭ ಉದ್ಘಾಟನೆಯನ್ನು ನೇರವೇರಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಾಳಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‍ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಮುಖ್ಯ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯ ಡಿ.ವಿ.ಸದಾನಂದಗೌಡ, ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ತ್ ನ ಎಲ್.ಬೋಜೇಗೌಡ, ಮಾಜಿ ಸಚಿವ ಬಿ.ಎ.ಜೀವಿಜಯ, ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ರಾಜ್ಯ ವಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಕ.ರಾ.ಪ್ರಾ.ಶಾ. ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಎ.ಎಸ್.ಚೇತನ್, ಕೊಡಗು ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಮಾಜಿ ಉಪಾಧ್ಯಕ್ಷರಾದ ಲೋಕೇಶ್ವರಿಗೋಪಾಲ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಮಾಜಿ ಅಧ್ಯಕ್ಷರಾದ ಸಂಜಯ್ ಜೀವಿಜಯ, ಬಿ.ಬಿ.ಭಾರತೀಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಗೌಡಳ್ಳಿ ವಿ.ಎಸ್.ಎಸ್.ಎನ್.ಬ್ಯಾಂಕ್ ಅಧ್ಯಕ್ಷ ಎಚ್.ಆರ್.ಸುರೇಶ್, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್, ಸೋಮವಾರಪೇಟೆ ತಾ.ಪಂ ಮಾಜಿ ಅಧ್ಯಕ್ಷ ಕೆ.ಎಂ.ಲೋಕೇಶ್, ಕೊ.ಜಿ.ವ.ಸಂ.ಮಾಜಿ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಸೋ.ತಾ.ವಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಮಡಿಕೇರಿ ತಾ. ಗೌಡಸಮಾಜ ಅಧ್ಯಕ್ಷ ಪಿ.ಪಿ.ಜಯಾನಂದ, ಕುಶಾಲನಗರ ಗೌಡ ಸಮಾಜ ತಾ. ಅಧ್ಯಕ್ಷ ಸಿ.ಎಂ.ಗಣಿಪ್ರಸಾದ್ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ, ಸಾಧನೆ ಮಾಡಿದವರನ್ನು ಹಾಗೂ ನಿವೃತ್ತರನ್ನು ಸನ್ಮಾನಿಸಲಾಗುವುದು, ಅಲ್ಲದೇ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಗುವುದೆಂದು ಸೋಮಶೇಖರ್ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.