ಮಡಿಕೇರಿ ಜೂ.15 : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಡಿಕೇರಿ ಉಪ ವಿಭಾಗದ ಕುಂದಚೇರಿ ಗ್ರಾಮದ ಚೆಟ್ಟಿಮಾನಿ ಸಮುದಾಯ ಭವನ, ಗೋಣಿಕೊಪ್ಪಲು ಉಪ ವಿಭಾಗದ ಹೊಸೂರು ಗ್ರಾ.ಪಂ. ಸಭಾಂಗಣ, ವಿರಾಜಪೇಟೆ ಉಪ ವಿಭಾಗದ ಹಚ್ಚಿನಾಡು ಸರ್ಕಾರಿ ಪ್ರಾಥಮಿಕ ಶಾಲೆ, ಹೆಗ್ಗಳ ಹಿರಿಯ ಪ್ರಾಥಮಿಕ ಶಾಲೆ, ಬೇಟೋಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ, ಕುಶಾಲನಗರ ಉಪ ವಿಭಾಗದ ಕೂಡಿಗೆ ಗ್ರಾಮದ ತೊರೆನೂರು ಗ್ರಾ.ಪಂ ಸಭಾಂಗಣ ಹಾಗೂ ಸೋಮವಾರಪೇಟೆ ಉಪ ವಿಭಾಗದ ಬಜೆಗುಂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜೂ.17 ರಂದು ಬೆಳಗ್ಗೆ 11 ಗಂಟೆಯಿಂದ ವಿದ್ಯುತ್ ಅದಾಲತ್ ನಡೆಯಲಿದೆ.
ಆದ್ದರಿಂದ ಈ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್‍ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.









