ಮಡಿಕೇರಿ ಜೂ.15 : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ 30 ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಕೊಡಗು ಜಿಲ್ಲಾ ಪೊಲೀಸ್ ವಿಪತ್ತು ನಿರ್ವಹಣಾ ತಂಡದಿಂದ ಮದೆನಾಡು ಗ್ರಾಮ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಅಭ್ಯಾಸವನ್ನು ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಮಡಿಕೇರಿ ಉಪವಿಭಾಗ ಸಹಾಯಕ ಎಸ್.ಪಿ, ಆರ್.ಪಿ.ಐ. ಡಿಎಆರ್ ಮಡಿಕೇರಿ ಹಾಗೂ ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.