ಮಡಿಕೇರಿ ಜೂ.16 : ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.
ಪಟ್ಟಣದ ಇಂದಿರಾ ಬಡಾವಣೆ ನಿವಾಸಿ ಪೂಣಚ್ಚ ಎಂಬುವವರ ಪುತ್ರಿ ಭಾವನ (21) ಮೃತ ಯುವತಿ. ಗುರುವಾರ ಸಂಜೆ ಕುಶಾಲನಗರದಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿದ್ದ ಭಾವನ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಕೊಪ್ಪದ ಬಳಿಯ ಮರೂರು ನಿವಾಸಿ, ವಿದ್ಯಾರ್ಥಿನಿ ನಿಸರ್ಗ ತೀವ್ರವಾಗಿ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾವನ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕುಶಾಲನಗರಕ್ಕೆ ಬಂದಿದ್ದ ಈಕೆ ಸ್ನೇಹಿತೆ ನಿಸರ್ಗಳೊಂದಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.









