ಮಡಿಕೇರಿ ಜೂ.16 : ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯು ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ನಗರದ ಕೊಡಗು ಗೌಡ ಸಮಾಜದಲ್ಲಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಶಿಷ್ಟಾಚಾರದಂತೆ ಆಹ್ವಾನ ಪತ್ರ ಮುದ್ರಣ, ಗಣ್ಯರ ಆಹ್ವಾನ, ಉಪನ್ಯಾಸ, ಗೀತಾಗಾಯನ ಕಾರ್ಯಕ್ರಮ ಏರ್ಪಡಿಸುವುದು ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದರು.
ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಕೆ.ಪಿ.ನಾಗರಾಜು, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು, ಉದಯ ಪೆರಿಯನ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಜಯಂತಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಪ್ರಮುಖರಾದ ಬೈತಡ್ಕ ಜಾನಕಿ, ಅಮೆ ಸೀತಾರಾಮ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ, ಪಿ.ಟಿ.ಮುತ್ತಮ್ಮ, ಪಿ.ಟಿ.ಧೃತಿ, ದೀಪ್ತಿ ರಂಜಿತ್, ಕೊಡಗು ಗೌಡ ಸಂಘದ ಕಾರ್ಯದರ್ಶಿ ಉದಯ ಕುಮಾರ, ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ರಿಶಿತ್ ಮಾದಯ್ಯ, ಮಣಜೂರು ಮಂಜುನಾಥ್ ಇತರರು ಕೆಂಪೇಗೌಡರ ಜಯಂತಿ ಆಚರಣೆ ಬಗ್ಗೆ ಹಲವು ಮಾಹಿತಿ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಜಯಂತಿ ಆಚರಣೆ ಸಂಬಂಧ ಮಾಹಿತಿ ನೀಡಿದರು.









