ಮಡಿಕೇರಿ ಜೂ.16: ಮಂಗಳೂರು ವಿಶ್ವವಿದ್ಯಾನಿಲಯ, ಕೊಡಗು ವಿಶ್ವವಿದ್ಯಾನಿಲಯ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಜೂ.19 ಮತ್ತು 20 ರಂದು 74ನೇ ಪ್ರತಿಭೋತ್ಸವ ಮತ್ತು ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಪ್ರತಿಭೋತ್ಸವ ಕಾರ್ಯಕ್ರಮವು ಜೂ.19 ರಂದು ಬೆಳಗ್ಗೆ 10.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ಪಿ.ತಿಮ್ಮಯ್ಯ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಆರ್.ಸವಿತಾ ರೈ, ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
74ನೇ ಕಾಲೇಜು ವಾರ್ಷಿಕೋತ್ಸವದ ಉದ್ಘಾಟನೆಯು ಜೂ.20 ರಂದು ಬೆಳಗ್ಗೆ 10.30 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂಥರ್ ಗೌಡ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರು ಹಾಗೂ ರೇಡಿಯೋಲಜಿಸ್ಟ್ ಡಾ.ಶ್ಯಾಮ್ ಅಪ್ಪಣ್ಣ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಸ್.ಅಶೋಕ್ ಆಲೂರ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.










