ಮಡಿಕೇರಿ ಜೂ.16 : ಅಂತರರಾಷ್ಟ್ರೀಯ 9ನೇ ಯೋಗ ದಿನಾಚರಣೆ ಪ್ರಯುಕ್ತ ಜೂ.17 ರಂದು ಬೆಳಗ್ಗೆ 8 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಯೋಗ ಜಾಥಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಚಾಲನೆ ನೀಡಲಿದ್ದಾರೆ.
ನಗರದ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾ ಗಾಂಧಿ ವೃತ್ತ, ಕಾಲೇಜು ರಸ್ತೆ ಮೂಲಕ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ ಯೋಗ ಜಾಥ ನಡೆಯಲಿದೆ.
ನಂತರ ಸಂಜೆ 6 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ಮಂಗಳೂರು ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗ ವಿದ್ಯಾಲಯದ ಪ್ರಾಚಾರ್ಯರಾದ ಡಾ.ಪುನೀತ್ ರಾಘವೇಂದ್ರ ಅವರು ಯೋಗದ ಮಹತ್ವ ಕುರಿತು ಮಾಹಿತಿ ನೀಡಲಿದ್ದಾರೆ.









