ಸೋಮವಾರಪೇಟೆ ಜೂ.16 : ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಪರಿಸರ ನಾಶದಿಂದ ಅನೇಕ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಾಸಕ ಡಾ.ಮಂತರ್‍ಗೌಡ ಹೇಳಿದರು.
ಅರಣ್ಯ ಇಲಾಖೆಯ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ನಿಡ್ತ ಮೀಸಲು ಅರಣ್ಯದ ಯರಪಾರೆಯಲ್ಲಿ ಬಿತ್ತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾವೆಲ್ಲರೂ ಪರಿಸರ ರಕ್ಷಣೆ ಮಾಡದಿದ್ದರೆ ಮುಂದಿನ ಪೀಳಿಗೆ ಚಿತ್ರದಲ್ಲಿ ಅರಣ್ಯ ಹಾಗೂ ವನ್ಯಪ್ರಾಣಿಗಳನ್ನು ನೋಡಬೇಕಾದ ಪರಿಸ್ಥಿತಿ ಬರಬಹುದು. ಮಕ್ಕಳು ಮನೆಯ ಸುತ್ತಮುತ್ತ ಗಿಡಗಳನ್ನು ನೆಟ್ಟು ಆರೈಕೆ ಮಾಡಿ ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.
ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್ ಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಎ.ಟಿ. ಪೂವಯ್ಯ, ಮಡಿಕೇರಿ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ.ಗೋಪಾಲ್, ಆರ್‍ಎಫ್‍ಓ ಗಳಾದ ಎಚ್.ಪಿ. ಚೇತನ್, ಶಿವರಾಮ್, ವಿಮಲ್‍ಬಾಬು ಇದ್ದರು.









