ಸೋಮವಾರಪೇಟೆ ಜೂ.16 : ಕೃಷಿ ಇಲಾಖೆಯ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಅಣಬೆ ಬೇಸಾಯದ ತರಬೇತಿ ಕಾರ್ಯಾಗಾರ ನಡೆಯಿತು.
ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಕಾರ್ಯಾಗಾರದಲ್ಲಿ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಶ್ಮಿ, ಅಣಬೆ ಬೇಸಾಯದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಕೃಷಿ ಸಹಾಯಕ ನಿರ್ದೇಶಕ ಯಾದವ್ ಬಾಬು, ಕೃಷಿ ಅಧಿಕಾರಿ ನವ್ಯನಾಣಯ್ಯ, ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಪೂರ್ಣಿಮಾ ಗೋಪಾಲ್ ಇದ್ದರು.








