ಸುಂಟಿಕೊಪ್ಪ,ಜೂ.17 : ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್ ವಿವಿಧ ಬಡಾವಣೆಗಳಿಗೆ ತಮ್ಮ ಸ್ವಂತ ಖರ್ಚಿನಿಂದ ಜಾಷಧಿ ಸಂಪಡಣೆ ಮಾಡಿದರು.
ನಂತರ ಮಾತನಾಡಿದ ಪಿ.ಎಂ.ಲತೀಫ್, ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಅನೇಕರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರೂ, ಸಂಬಂಧಿಸಿದ ಇಲಾಖೆಗಳು ರೋಗ ನಿಯಂತ್ರಣಕ್ಕೆ ಮುಂದಾಗದೆ ತಾತ್ಸರ ಮನೋಭಾವನೆಯನ್ನು ತೋರುತ್ತಿರುವುದು ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾ.ಪಂ. ಸದಸ್ಯರಾದ ಸಬಾಸ್ಟೀನ್, ರಫೀಕ್ ಖಾನ್ ಮತ್ತಿತರರು ಭೇಟಿ ನೀಡಿ ಆರೋಗ್ಯ ಇಲಾಖೆಯ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಪಿ.ಎಂ.ಲತೀಫ್ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭ ಪಂಚಾಯಿತಿ ಸದಸ್ಯ ರಫೀಕ್‍ಖಾನ್, ರಜಾಕ್, ವಾಹನ ಚಾಲಕ ರಿಜ್ವಾನ್, ಕೋಟೆಕಾಡು ತೋಟದ ವ್ಯವಸ್ಥಾಪಕ ರಜಾಕ್ ಹಾಗೂ ಕಾರ್ಮಿಕರು ತೊಡಗಿಸಿಕೊಂಡಿದ್ದರು.