ಮಡಿಕೇರಿ ಜೂ.17 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಸುಸ್ಥಿರ ಅಭಿವೃದ್ಧಿಗಾಗಿ ಡಿಜಿಟಲೀಕರಣ’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಿತು.
ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಸಮ್ಮೇಳನದಲ್ಲಿ ಆನ್ ಲೈನ್ ಮತ್ತು ಆಫ್ ಲೈನ್ ಸೇರಿದಂತೆ ಸುಮಾರು 60 ಪ್ರಬಂಧಗಳನ್ನು ಮಂಡಿಸಲಾಯಿತು.
ಪ್ರಧಾನ ಭಾಷಣಕಾರರಾಗಿ ಡಾ.ಕೃಷ್ಣ ರಾಜ್, ಅಂತರರಾಷ್ಟ್ರೀಯ ಮಟ್ಟದ ಸಂಪನ್ಮೂಲ ವ್ಯಕ್ತಿ ಡಾ.ಬೇಟ ಪರ್ಕಸ (ಇಂಡೋನೇಷ್ಯಾ) ಮತ್ತು ಪ್ರೊ.ಅಬ್ದುಲ್ ವಾಸಿ ಗೌಹರ್ (ಅಫ್ಘಾನಿಸ್ತಾನ್) ಭಾಗವಹಿಸಿದ್ದರು.
ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಡಾ.ಸೀನಪ್ಪ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಡಾ. ಕೆ.ಶೈಲಶ್ರೀ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರು, ಕಾಲೇಜಿನ ಇತರ ವಿಭಾಗದ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ನಿಖಿಲ್ ನಿರೂಪಿಸಿದರು.









