ಮಡಿಕೇರಿ ಜೂ.17 : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ಜಿಲ್ಲಾ ಕಸಾಪ ಕಚೇರಿಯಲ್ಲಿ ಕಸಾಪ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳ ವತಿಯಿಂದ ಕಳೆದ ವರ್ಷ ಹಮ್ಮಿಕೊಂಡಿದ್ದ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಲೆಕ್ಕಪತ್ರ ಮಂಡನೆ, ಗೌರಮ್ಮ ಕಸಾಪ ಜಿಲ್ಲಾ ಘಟಕದ ಸಣ್ಣ ಕಥೆಗಳ ಗೌರಮ್ಮ ಕಥಾ ಸ್ಪರ್ಧೆ, ದತ್ತಿ ಕಾರ್ಯಕ್ರಮಗಳ ಆಯೋಜನೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಯಿತು.
ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಗಡಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚನೆ ನೀಡಿದ್ದು, ಆ ನಿಟ್ಟಿನಲ್ಲಿ ಮಳೆಗಾಲದ ನಂತರ ಗಡಿ ಭಾಗ ಕರಿಕೆ ಗ್ರಾಮದಲ್ಲಿ `ಗಡಿ ಉತ್ಸವ’ ಆಯೋಜಿಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ಆರಂಭದಲ್ಲಿ ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕಳೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ವರದಿ ಮಂಡಿಸಿದರು.
ಜಿಲ್ಲಾ ಮತ್ತು ತಾಲ್ಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಲೆಕ್ಕಪತ್ರವನ್ನು ಕೂಡಲೇ ಆಡಿಟ್ ಮಾಡಿ ಒದಗಿಸಬೇಕು ಎಂದು ಕಸಾಪ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಸಲಹೆ ನೀಡಿದರು.
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ದತ್ತಿ ಉಪನ್ಯಾಸ ಕಾರ್ಯಕ್ರಮಗಳು ಆದಷ್ಟು ಶೀಘ್ರ ಆಯೋಜಿಸುವಂತೆ ತಾಲ್ಲೂಕು ಘಟಕದ ಅಧ್ಯಕ್ಷರಿಗೆ ತಿಳಿಸಿದರು.
ಕಸಾಪ ಜಿಲ್ಲಾ ಘಟಕದ ನಿಕಟ ಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್, ಸೋಮವಾರಪೇಟೆ ತಾಲ್ಲೂಕಿನ ಕಸಾಪ ಕಟ್ಟಡ ಸಂಬಂಧ ಹಲವು ಸಲಹೆ ಮಾರ್ಗದರ್ಶನ ನೀಡಿದರು.
ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕಸಾಪ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಅಂಬೆಕಲ್ಲು ಮನವಿ ಮಾಡಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅದರಂತೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಿಡುಗಡೆಗೆ ಅನುಮೋದಿಸಲಾಯಿತು.
ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಡಿ.ವಿಜೇತ್, ಡಿ.ಪಿ.ರಾಜೇಶ್, ಕೆ.ಎಸ್.ಮೂರ್ತಿ, ಕಾರ್ಯಕಾರಿ ಸಮಿತಿ ಸದಸ್ಯ ಸಹನಾ ಕಾಂತಬೈಲು, ಪ್ಯಾನ್ಸಿ ಮುತ್ತಣ್ಣ, ಎಚ್.ಎಸ್.ಪ್ರೇಮ್ ಕುಮಾರ್, ಚಂದ್ರಶೇಖರ್, ವೆಂಕಟನಾಯಕ ಇತರರು ಇದ್ದರು.
Breaking News
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*