ಮಡಿಕೇರಿ ಜೂ.17 : ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಡೆದ ಯೋಗ ಜಾಥಕ್ಕೆ ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪ್ರತಿಯೊಬ್ಬರ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಯೋಗ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ 2023ರ 9ನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಗಾಂಧಿ ಮೈದಾನದಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು.
ಜೂನ್ 21 ರಂದು ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಶಾಲಾ ಮಕ್ಕಳು, ಎಲ್ಲಾ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಹೇಳಿದರು.
ಈ ಬಾರಿಯ ಘೋಷವಾಕ್ಯ ವಸುದೈವ ಕುಟುಂಬಕ್ಕಾಗಿ ಯೋಗ ಆಗಿರುವುದರಿಂದ ಪ್ರತಿಯೊಬ್ಬರೂ ಮನೆಯಲ್ಲಿಯೇ ಯೋಗದಲ್ಲಿ ಪಾಲ್ಗೊಳ್ಳುವಂತೆ ಡಾ.ಬಿ.ಸಿ.ಸತೀಶ ತಿಳಿಸಿದರು.
ಜಾಥಾದಲ್ಲಿ ನಗರಸಭೆ ಅಧ್ಯಕರಾದ ಅನಿತಾ ಪೂವಯ್ಯ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಪೌರಾಯುಕ್ತ ವಿಜಯ, ವೈದ್ಯಾಧಿಕಾರಿ ಡಾ.ರಾಜಾರಾಂ ಇತರರು ಪಾಲ್ಗೊಂಡಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*