ಮಡಿಕೇರಿ ಜೂ.17 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯಾ ಸಿಇಟಿ/ಎನ್‍ಇಇಟಿ(ನೀಟ್) ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಕ್, ಎಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಪಾರ್ಮಸ್ಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮ್ ಸೈನ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. ಸಿಇಟಿ/ಎನ್‍ಇಇಟಿ ಮುಖೇನ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್ https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ. ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 05(ಪಾಸ್ ಪೋಟ್ ಸೈಜ್), ಸಿಇಟಿ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ.50 ರ ಛಾಪಕಾಗದದಲ್ಲಿ Indemnity Bond ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲಿಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. “ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ, 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂ.ಸಂ.08272-201449 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ದಿವಾಕರ ತಿಳಿಸಿದ್ದಾರೆ.







