ಮಡಿಕೇರಿ ಜೂ.17 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಇವರ ಸಹಯೋಗದಲ್ಲಿ ಜೂ.22 ರಂದು ಬೆಳಗ್ಗೆ 10.30 ಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಕುಶಾಲನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ, ದಿಯಾ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ರಾಣಿ ಮದ್ರಾಸ್-ಮೈಸೂರು, ಜಸ್ಟ್ ಡಯಲ್-ಬೆಂಗಳೂರು, ಈಕ್ವಲೈಜರ್ ಆರ್ಎಂಸಿ-ಮೈಸೂರು, ಪ್ಯಾಲೆಸ್ ಟೊಯೋಟಾ ಕುಶಾಲನಗರ, ಅಲ್ಫಾ ಟೆಕ್ನಾಲಜಿ-ಮಡಿಕೇರಿ, ಪುಜಿಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಎಸ್ಎಲ್ಎನ್ ಕಾಫಿ ಪ್ರೈವೇಟ್ ಲಿಮಿಟೆಡ್ ಕೂಡಿಗೆ, ಮ್ಯಾಜಿಕ್ ಬಸ್ ಇಂಡಿಯಾ ಬೆಂಗಳೂರು, ಪರ್ಪಲ್ ಪಾಲ್ಮ್ ರೆಸಾರ್ಟ್ ಮತ್ತು ಸ್ಪಾ-ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ ಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ. 08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Breaking News
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*