ಮಡಿಕೇರಿ ಜೂ.17 : ಪ್ರಸಕ್ತ(2023-24) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಖ್ಯಾತೆ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಇಲ್ಲಿಗೆ ರಸಾಯನ ಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳಿಗೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ.7676473767/ 9632746411 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.












