ಮಡಿಕೇರಿ ಜೂ.17 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯುದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜುಲೈ, 15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು www.dom.karnataka.gov.in ಹಾಗೂ ದೂ.ಸಂ.08272-225528/ 220214 ಸಂಪರ್ಕಿಸಬಹುದು ಹಾಗೂ www.dom.karnataka.gov.in ಇಲಾಖಾ ವೆಬ್‍ಸೈಟ್‍ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯ ಮಾಹಿತಿ ಪಡೆದು ಸದುಪಯೋಗ ಪಡಿಸಿಕೊಳ್ಳವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ದಿವಾಕರ ತಿಳಿಸಿದ್ದಾರೆ.







