ಮಡಿಕೇರಿ ಜೂ.17 : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಹಾಗೂ ಕೇಂದ್ರ ಸರ್ಕಾರ ನೀಡಿರುವ ಅಭಿವೃದ್ಧಿ ಕಾರ್ಯಗಳನ್ನ ಮನೆ ಮನೆಗೆ ತಲುಪಿಸುವ ಅಭಿಯಾನದ ಅಂಗವಾಗಿ ವಿರಾಜಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು.
ಈ ಸಂದರ್ಭ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಸರ್ಕಾರದ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕೆ.ಜಿ ಬೋಪಯ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.