ಸೋಮವಾರಪೇಟೆ ಜೂ.19 : ಕೊಡಗಿನ ವಿವಿಧ ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಘಟಕ ಅಳವಡಿಸುವಂತೆ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಪದಾಧಿಕಾರಿಗಳು ಶಾಸಕ ಡಾ. ಮಂತರ್‍ಗೌಡ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದರು.
ಮನವಿ ಸಲ್ಲಿಕೆ ಸಂದರ್ಭ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ವಿ.ಕೃಷ್ಣ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಷಂಶುದ್ಧೀನ್, ಕಾರ್ಯದರ್ಶಿ ರೋನಾಲ್ಡ್, ಪದಾಧಿಕಾರಿ ಶಿರಂಗಾಲದ ಪುರುಷೋತ್ತಮ ಆಚಾರ್ಯ ಹಾಜರಿದ್ದರು.









