ಮಡಿಕೇರಿ ಜೂ.19 : ಪ್ರಸಕ್ತ (2022-23) ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಕೌನ್ಸಿಲಿಂಗ್ ಪ್ರಕ್ರಿಯೆಯು ಜೂ.20, 21 ಮತ್ತು 22 ರಂದು ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.
ಹೆಚ್ಚುವರಿಯಾದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ಪೂರ್ವಹ್ನ ಮತ್ತು ಹೆಚ್ಚುವರಿಯಾದ ಪ್ರೌಢಶಾಲಾ ಶಿಕ್ಷಕರುಗಳಿಗೆ ಅಪರಾಹ್ನ ಜೂ.20, 21 ಮತ್ತು 22 ರಂದು ಕೌನ್ಸಿಲಿಂಗ್ ನಡೆಸಲಾಗುತ್ತದೆ. ಹೆಚ್ಚುವರಿಯಾದ ಪ್ರಾಥಮಿಕ ಮತ್ತು ಪೌಢಶಾಲಾ ಶಿಕ್ಷಕರುಗಳು ತಪ್ಪದೇ ಹೆಚ್ಚುವರಿ ಕೌನ್ಸಿಲಿಂಗನಲ್ಲಿ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ತಿಳಿಸಿದ್ದಾರೆ.









