Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪಿ.ಎಂ.ಕಿಸಾನ್ ನೋಂದಾಯಿತ ರೈತರು ಇ-ಕೆವೈಸಿ ಮಾಡಿಸಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಿ.ಎಂ.ಕಿಸಾನ್ ನೋಂದಾಯಿತ ರೈತರು ಇ-ಕೆವೈಸಿ ಮಾಡಿಸಿ

ಜೂನ್ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.19 : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಜಿಲ್ಲೆಯ ಸುಮಾರು 49,582 ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಅರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ-ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.
ರೈತರು http://pmkisan.gov.in ಪೋರ್ಟಲ್‍ನ ಪಾರ್ಮರ್ಸ್ ಕಾರ್ನರ್‍ನ ಇ-ಕೆವೈಸಿ ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‍ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‍ನಲ್ಲಿ ದಾಖಲಿಸಿ “ಸಬ್‍ಮಿಟ್ ಫಾರ್ ಆಥ್ (SUBMIT FOR AUTH) ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು e-KYC is “successfully submitted” ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ, “e-KYC already done” ಎಂಬ ಮಾಹಿತಿ ಗೋಚರಿಸುತ್ತದೆ).
ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುದಿಲ್ಲವೋ ಅವರು ಸಿಎಸ್‍ಸಿ(ಸಿಟಿಜನ್ ಸರ್ವಿಸ್ ಸೆಂಟರ್ಸ್) ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.
ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಜೂನ್, 30 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಅ.24 NEWS DESK : ಮಳೆಯಿಂದಾಗಿ ಕುಶಾಲನಗರ ವ್ಯಾಪ್ತಿಯಲ್ಲಿ ವಿವಿಧ ಮನೆಗಳಿಗೆ ಹಾನಿಯಾಗಿದೆ. ತಾಲೂಕಿನ ಚಿಕ್ಕ ಅಳುವಾರ ಗ್ರಾಮದ…

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ

ಅಕ್ಟೋಬರ್ 24, 2026

ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ

ಅಕ್ಟೋಬರ್ 24, 2026

ನವೆಂಬರ್‌ನಲ್ಲಿ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಮಹಾಸಭೆ, ಸಂತೋಷ ಕೂಟ

ಅಕ್ಟೋಬರ್ 24, 2026

ಮಡಿಕೇರಿ ದಸರಾ ವೇದಿಕೆಯಲ್ಲಿ ಗಮನ ಸೆಳೆದ ಸಂಸ್ಕೃತಿ ಸಿರಿ ಟ್ರಸ್ಟ್‌ನ ‘ಮಣಿಕಂಠೋದಯ’ ನೃತ್ಯರೂಪಕ

ಅಕ್ಟೋಬರ್ 24, 2026

ಮಾದಾಪುರದಲ್ಲಿ ಅದ್ದೂರಿಯಾಗಿ 6ನೇ ವರ್ಷದ ಸಾರ್ವಜನಿಕ ಆಯುಧ ಪೂಜೆ ಆಚರಣೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.