ಮಡಿಕೇರಿ ಜೂ.19 : ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಪದವಿ ಪ್ರದಾನ ಸಮಾರಂಭವು ಜೂ.20 ರಂದು ಮಧ್ಯಾಹ್ನ 2.30 ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್(ಅರಣ್ಯ) ಡಾ.ಸಿ.ಜಿ.ಕುಶಾಲಪ್ಪ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್(ಅರಣ್ಯ) ಡಾ.ಜಿ.ಎಂ.ದೇವಗಿರಿ ಇತರರು ಪಾಲ್ಗೊಳ್ಳಲಿದ್ದಾರೆ.









