ಮಡಿಕೇರಿ ಜೂ.19 : ನಗರದ ವಿದ್ಯಾನಗರದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿರುವ ಉಪಹಾರ ಗೃಹವನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನಡೆಸಲು ಟೆಂಡರ್/ ಕೊಟೇಷನ್‍ನ್ನು ಆಸಕ್ತಿವುಳ್ಳ ಹಾಗೂ ನುರಿತ ಹೋಟೆಲ್ ಉದ್ದಿಮೆದಾರರಿಂದ ಮುಚ್ಚಿದ ಲಕೋಟೆಗಳಲ್ಲಿ ಕೊಟೇಷನ್ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ, ಷರತ್ತುಗಳು ಹಾಗೂ ನಿಬಂಧನೆಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/kodagu ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವವರು, ನಗರದ ವಿದ್ಯಾನಗರದಲ್ಲಿರುವ ನೂತನ ನ್ಯಾಯಾಲಯ ಆವರಣದಲ್ಲಿರುವ ಉಪಹಾರ ಗೃಹವನ್ನು ನೋಡಬಹುದು.
`ಮಡಿಕೇರಿಯ ನೂತನ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿರುವ ಉಪಹಾರ ಗೃಹ ನಡೆಸುವ ಸಲುವಾಗಿ ಟೆಂಡರು’ ಎಂದು ನಮೂದಿಸಬೇಕು. ಈ ಮುಚ್ಚಿದ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಡಗು-ಮಡಿಕೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ವಿದ್ಯಾನಗರ, ಮಡಿಕೇರಿ-571201 ಇವರ ವಿಳಾಸಕ್ಕೆ ಜು.18 ರ ಸಂಜೆ 6 ಗಂಟೆ ಒಳಗೆ ಸಲ್ಲಿಸಬೇಕು. ನಂತರ ತಲುಪಿದ ಲಕೋಟೆಗಳನ್ನು ಪರಿಗಣಿಸಲಾಗುವುದಿಲ್ಲ.
ಮುಚ್ಚಿದ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಡಗು-ಮಡಿಕೇರಿ ಇವರ ಸಮ್ಮುಖದಲ್ಲಿ ಜು.20 ರಂದು ಸಂಜೆ 6 ಗಂಟೆಗೆ ತೆರೆಯಲಾಗುವುದು. ಟೆಂಡರ್‍ದಾರರು ಅಥವಾ ಟೆಂಡರ್‍ದಾರರು ಇಚ್ಚಿಸುವ ಅವರ ಪ್ರತಿನಿಧಿಯು ಆ ಸಮಯದಲ್ಲಿ ಹಾಜರಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*