ಮಡಿಕೇರಿ ಜೂ.19 : ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಪಡೆಯಲು ಕೊಡಗು ಜಿಲ್ಲೆಯ ಗೃಹ ಬಳಕೆಯ ವಿದ್ಯುತ್ ಗ್ರಾಹಕರು ಜೂ.18 ರಿಂದ ಸೂಕ್ತ ದಾಖಲಾತಿಗಳೊಂದಿಗೆ ಮಡಿಕೇರಿ ಕಾರ್ಯ ಮತ್ತು ಪಾಲನಾ ವಿಭಾಗ ಕಚೇರಿ, ಮಡಿಕೇರಿ, ಕುಶಾಲನಗರ ಸೋಮವಾರಪೇಟೆ, ಗೋಣಿಕೊಪ್ಪಲು, ವಿರಾಜಪೇಟೆ ಕಾರ್ಯ ಮತ್ತು ಪಾಲನಾ ಉಪವಿಭಾಗ/ಶಾಖಾ ಕಚೇರಿ ಹಾಗೂ ತಾಳತ್‍ಮನೆ, ಸಂಪಾಜೆ, ಭಾಗಮಂಡಲ, ಮೂರ್ನಾಡು, ನಾಪೋಕ್ಲು, ಕೂಡಿಗೆ, ಸುಂಟಿಕೊಪ್ಪ, ಚೆಟ್ಟಳ್ಳಿ, ಮಾದಾಪುರ, ಶಾಂತಳ್ಳಿ, ಶನಿವಾರಸಂತೆ, ಆಲೂರು ಸಿದ್ದಾಪುರ, ಕೊಡ್ಲಿಪೇಟೆ, ಶ್ರೀಮಂಗಲ, ಬಾಳೆಲೆ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ ಕಾರ್ಯ ಮತ್ತು ಪಾಲನಾ ಶಾಖಾ ಕಚೇರಿಗಳಲ್ಲಿ ಚಾ.ವಿ.ಸ.ನಿ.ನಿ.(CESCOM) ಕಚೇರಿಗಳ ಗೃಹಜ್ಯೋತಿ ಕೌಂಟರ್‍ಗಳಿಗೆ ಭೇಟಿ ನೀಡಿ ಅರ್ಜಿ ನೋಂದಾಯಿಸಿಕೊಳ್ಳಬಹುದು.
ಸಾರ್ವಜನಿಕರು ನಿಮ್ಮ ಮೊಬೈಲ್, ಲ್ಯಾಪ್‍ಟಾಪ್, ಕಂಪ್ಯೂಟರ್, ಸಮೀಪದ ಕರ್ನಾಟಕ-1, ಗ್ರಾಮ-1, ಗ್ರಾಮ ಪಂಚಾಯತ್ ಮತ್ತು ನಾಡ ಕಚೇರಿಗಳಲ್ಲಿ ಹಾಗೂ ಸೇವಾ ಸಿಂಧು ಆನ್‍ಲೈನ್ ತಂತ್ರಾಂಶದಲ್ಲೂ ಕೂಡ ಗೃಹಜ್ಯೋತಿ ಯೋಜನೆಯ ಅರ್ಜಿಯನ್ನು ನೋಂದಾಯಿಸಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*