ಮಡಿಕೇರಿ ಜೂ.19 : ಗಂಭೀರವಾಗಿ ಗಾಯಗೊಂಡಿದ್ದ ಹುಲಿಯೊಂದು ಮೃತಪಟ್ಟಿರುವ ಘಟನೆ ಮಾಲ್ದಾರೆ ಸಮೀಪದ ಅಸ್ತಾನ ಹಾಡಿ ವ್ಯಾಪ್ತಿಯಲ್ಲಿ ನಡೆದಿದೆ.
ಹುಲಿಗಳ ನಡುವಿನ ಕಾದಾಟದಲ್ಲಿ ಕಾಲಿಗೆ ಗಾಯವಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಅರಣ್ಯದಂಚಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಹುಲಿ ಕೆರೆಯ ಬಳಿ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಹುಲಿ ಸೆರೆಗೆ ಮುಂದಾಗಿತ್ತಾದರೂ ಇದೀಗ ಕೊನೆಯುಸಿರೆಳೆದಿದೆ.











