ಮಡಿಕೇರಿ ಜೂ.19 : ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ.
ನಗರಕ್ಕೆ ಕುಡಿಯುವ ನೀರನ್ನು ಒದಗಿಸುತ್ತಿರುವ ಕೂಟುಹೊಳೆ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅಧ್ಯಕ್ಷರು ದುರಸ್ತಿ ಕಾರ್ಯಗಳನ್ನು ಪರಿಶೀಲಿಸಿದರು.
ನಂತರ ಮಾತನಾಡಿದ ಅವರು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದoತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕೂಟುಹೊಳೆಯ ಮೋಟಾರ್ ದುರಸ್ತಿಯಾಗಿ ಸುಸ್ಥಿತಿಯಲ್ಲಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ. ನಗರದ 23 ವಾರ್ಡ್ಗಳ ಬೀದಿದೀಪಗಳ ದುರಸ್ತಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿರುವ ಎಲ್ಲಾ ಸಾರ್ವಜನಿಕ ಬಸ್ ತಂಗುದಾಣ ಮತ್ತು ಶೌಚಾಲಯಗಳನ್ನು ಶುಚಿಗೊಳಿಸುವ ಕಾರ್ಯ ಕೈಗೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಜನರು ಎಲ್ಲೆಂದರಲ್ಲಿ ಕಸ ಹಾಕದೆ ಕಸ ಸಂಗ್ರಹದ ವಾಹನಕ್ಕೆ ಹಾಕಿ ಸಹಕರಿಸುವಂತೆ ಅನಿತಾ ಪೂವಯ್ಯ ಮನವಿ ಮಾಡಿದರು.
::: ಪರಿಶೀಲನೆ :::
ಕೂಟುಹೊಳೆಯ ಪಂಪ್ ಹೌಸ್ ನ ಸ್ಥಿತಿಗತಿ ಮತ್ತು ಫೀ.ಮಾ.ಕಾರ್ಯಪ್ಪ ವೃತ್ತದ ಹೈ ಮಾಸ್ಟ್ ದೀಪದ ದುರಸ್ತಿ ಕಾರ್ಯವನ್ನು ಪರಿಶೀಲಿಸಿದರು. ನಗರದ ಶೌಚಾಲಯ ಮತ್ತು ಬಸ್ ತಂಗುದಾಣಗಳನ್ನು ಶುಚಿಯಾಗಿಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬoಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*