ನಾಪೋಕ್ಲು ಜೂ.20 : ಮೂರ್ನಾಡು ಪದವಿ ಕಾಲೇಜಿನ ಪೋಷಕ ಶಿಕ್ಷಕ ಸಭೆಯನ್ನು ಇತ್ತೀಚೆಗೆ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖ ಚಿಣ್ಣಪ್ಪ ಮಾತನಾಡಿ, ಕಾಲೇಜಿನ ಚಟುವಟಿಕೆಗಳ ಬಗ್ಗೆ ಪೋಷಕರಿಗೆ ವಿವರಿಸಿ ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು ಹಾಗೂ ಮೊಬೈಲ್ ನಿಂದ ಅವರನ್ನು ಆದಷ್ಟು ದೂರವಿರಿಸಬೇಕೆಂದು ಕಿವಿ ಮಾತು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಪೆಮ್ಮಡಿಯ0ಡ ವೇಣು ಅಪ್ಪಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಬಹಳಷ್ಟು ಇದೆ, ವಿದ್ಯಾರ್ಥಿಗಳು ಉತ್ತಮ ನಡತೆಯನ್ನು ರೂಪಿಸಿಕೊ0ಡು ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎಂದು ನುಡಿದರು.
ಪೋಷಕ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಬಿ.ಪ್ರಭಾಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಕಲ್ಪನಾ ಸ್ವಾಗತಿಸಿ, ಉಪನ್ಯಾಸಕ ಹರೀಶ್ ನಿರೂಪಿಸಿ, ಉಪನ್ಯಾಸಕ ನವೀನ್ ವಂದಿಸಿದರು.
ವರದಿ : ದುಗ್ಗಳ ಸದಾನಂದ