ಮಡಿಕೇರಿ ಜೂ.20 : ಕೊಡಗು ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೆಂಕಟರಾಜ ನೇಮಕಗೊಂಡಿದ್ದು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಬಿ.ಸಿ.ಸತೀಶ್ ಅವರು ಸುವರ್ಣ ಆರೋಗ್ಯ ಟ್ರಸ್ಟ್‍ನ ಹೆಚ್ಚುವರಿ ಕಾರ್ಯದರ್ಶಿಯಾಗಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.
ಈ ಸಂಬಂಧ ಕರ್ನಾಟಕ ಸರಕಾರ ಆದೇಶ ಹೊರಡಿಸಿದ್ದು, ರಾಜ್ಯದ 12 ಅಧಿಕಾರಿಗಳನ್ನು ಬೇರೆ ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ.










