ಮಡಿಕೇರಿ ಜೂ.20 : ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ.ಎನ್.ವಿ.ಪ್ರಸಾದ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ, ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರಕಾರಿ ವರದಿ ಮಾಡಲು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಮಟ್ಟದಲ್ಲಿ ಅಧಿಕಾರಗಳನ್ನು ನೇಮಿಸಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಎಸ್.ಕಲ್ಪನ ಆದೇಶದಲ್ಲಿ ತಿಳಿಸಿದ್ದಾರೆ.









