ಮಡಿಕೇರಿ ಜೂ.20 : ಕೊಡಗು ಪ್ರೆಸ್ ಕ್ಲಬ್ ನಿರ್ದೇಶಕ ಕೆ.ಆರ್. ಪ್ರಸಿನ್ ಗೌಡ ಬರೆದಿರುವ ಚೊಚ್ಚಲ ಕೃತಿ “ಮನ ಮಾತದಾಗ” ಲೋಕಾರ್ಪಣೆ ಕಾರ್ಯಕ್ರಮ ಜೂ.27 ರಂದು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯಿಂದ ಅಂದು ಬೆಳಗ್ಗೆ 10.30 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಮಕ್ಕಳ ತಜ್ಞ ವೈದ್ಯ ಡಾ.ಬಿ.ಸಿ. ನವೀನ್‍ಕುಮಾರ್ ಉದ್ಘಾಟಿಸಲಿದ್ದಾರೆ. ಮನ ಮಾತಾದಾಗ ಕೃತಿಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಅನಾವರಣ ಮಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಕ್ರಮ ಸಂಪಾದಕ ವೃಶಾಂಕ್ ಭಟ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಪಾಲ್ಗೊಳ್ಳಲಿದ್ದಾರೆ.