ಮಡಿಕೇರಿ ಜೂ.20 : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕ ಪಿ.ಬಿ.ಯತೀಶ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯೋಗೇದ್ರ ನಾಯಕ್ ಅವರಿಗೆ ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷರಾದ ಆನಂದ್ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದು 2022-2023ನೇ ಸಾಲಿನ ಲಾಭಾಂಶದಿಂದ ತೆಗೆದ ಶೇಕಡಾ 2 ರಷ್ಟು ಮೊತ್ತವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಸಹಕಾರ ಸಂಘಗಳ ಕಾಯ್ದೆ ಪ್ರಕಾರ ನೀಡಬೇಕಾಗಿರುವುದರಿಂದ ಜಿಲ್ಲೆಯಲ್ಲೇ ಪ್ರಥಮವಾಗಿ ಸಹಕಾರ ಶಿಕ್ಷಣ ನಿಧಿ ಚೆಕ್ಕನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಗೆ ನೀಡಿರುತ್ತಾರೆ.









