ಕುಶಾಲನಗರ ಜೂ.21 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕೊಡ ಮಾಡುವ ರಾಜ್ಯಮಟ್ಟದ ಕಾಯಕ ರತ್ನ 2023 ಪ್ರಶಸ್ತಿ ಗೆ ಕೊಡಗು ಜಿಲ್ಲೆಯ ಕುಶಾಲನಗರದ ಶಾಂತ ಶ್ರೀಪತಿ ಆಯ್ಕೆಯಾಗಿದ್ದಾರೆ.
ನಗರದ ಶಾರದಾ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಲವು ವರ್ಷಗಳ ಸಾಧನೆ ಮೂಲಕ ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿರುವ ಶಾಂತ ಶ್ರೀಪತಿ ಅªರಿಗೆ ಜೂ.25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಪರಿಷತ್ತಿನ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸಮಾರಂಭದಲ್ಲಿ ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಎ. ಎಸ್, ಕಿರಣ್ ಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.








